Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಧೋರಣೆ ರಾಜ್ಯದ ಅಭಿವೃದ್ಧಿಗೆ ಮಾರಕ: ಬಿ.ಎಸ್‌.ಯಡಿಯೂರಪ್ಪ

ಸಿದ್ದರಾಮಯ್ಯ ಧೋರಣೆ ರಾಜ್ಯದ ಅಭಿವೃದ್ಧಿಗೆ ಮಾರಕ: ಬಿ.ಎಸ್‌.ಯಡಿಯೂರಪ್ಪ
ಬೆಂಗಳೂರು , ಸೋಮವಾರ, 18 ಜುಲೈ 2016 (10:53 IST)
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತರಾಜ್ಯ ಮಂಡಳಿ ನಿಗಮ ಸಭೆಗೆ ಹಾಜರಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆ ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
 
ಬಿಜೆಪಿ ಚೈತನ್ಯ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕ್ರಕರಣ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್ ಅವರು ವರದಿ ತರಿಸಿಕೊಂಡಿದ್ದಾರೆ. ವರದಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
 
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತರಾಜ್ಯ ಮಂಡಳಿ ನಿಗಮ ಸಭೆಗೆ ಹಾಜರಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಧೋರಣೆ ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಿದ್ದು, ಲೋಕಸಭೆ ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಪಕ್ಷಗಳು ಸಹಕರಿಸದಿದ್ದರೆ ಕಲಾಪ ಮೊಟಕು: ಸಿಎಂ ಸಿದ್ದರಾಮಯ್ಯ