Publish Date: Sat, 09 Feb 2019 (18:26 IST)
Updated Date: Sat, 09 Feb 2019 (18:28 IST)
ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಾಮ್ರಾಟ್ ಹೋಟೆಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್ .ರವಿಕುಮಾರ ಹೇಳಿದರು.
ಗುರುಮಿಟಕಲ್ ಸ್ಥಳೀಯ ಜೆಡಿಎಸ್ ಶಾಸಕರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದ ಎಂಟು ತಿಂಗಳುಗಳಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರ ಸರಕಾರದ ಬಹುತೇಕ ಯೋಜನೆಗಳನ್ನು ತಾವೇ ಮಾಡಿಸಿದ್ದು ಎಂದು ಹೇಳುತ್ತಾ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ಇವರು, ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಎಂದು ಶಾಸಕರ ವಿರುದ್ಧ ಹರಿಹಾಯ್ದರು.