ಬಿಜೆಪಿ ಅಧ್ಯಕ್ಷ ಹನಿಟ್ರಾಪ್...!!!!

Webdunia
ಬುಧವಾರ, 13 ಜುಲೈ 2022 (15:01 IST)
ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸೊಲ್ಲಾಪುರ ಜಿಲ್ಲಾ (ಗ್ರಾಮೀಣ) ಅಧ್ಯಕ್ಷ ಶ್ರೀಕಾಂತ್ ದೇಶ್‌ಮುಖ್ ಅವರನ್ನು ಪದಚ್ಯುತಗೊಳಿಸಿದೆ.
 
ದೇಶ್‌ಮುಖ್ ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ವೀಡಿಯೊ ವೈರಲ್ ಆದ ನಂತರ ಅವರನ್ನು ಪದಚ್ಯುತಗೊಳಿಸಿದೆ ಎಂದು ಪಕ್ಷದ ಮುಖಂಡರೊಬ್ಬರು ಮಂಗಳವಾರ ತಿಳಿಸಿದ್ದಾರೆ.
ದೇಶಮುಖ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ರಾತ್ರಿ ತಿಳಿಸಿದ್ದಾರೆ.
 
ವಿಡಿಯೊ ಕ್ಲಿಪ್‌ನಲ್ಲಿ ಕಂಡುಬರುವ ಮಹಿಳೆ ಮುಂದೆ ಬಂದು ಪೊಲೀಸರಿಗೆ ದೂರು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಚಿತ್ರಾ ವಾಘ್ ಹೇಳಿದ್ದಾರೆ.
 
ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ ದೇಶಮುಖ್ ಅವರು ಕೋಣೆಯಲ್ಲಿ ಹಾಸಿಗೆಯ ಮೇಲೆ ಕುಳಿತಿರುವಾಗ ಅವಳು ಅಳುತ್ತಿದ್ದಳು. ಇವರು ತನ್ನೊಂದಿಗೆ ಸಂಬಂಧ ಇಟ್ಟುಕೊಂಡು ವಂಚಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ.
 
ಏತನ್ಮಧ್ಯೆ, ಎರಡು ದಿನಗಳ ಹಿಂದೆ ದೇಶಮುಖ್ ಅವರು ನೀಡಿದ ದೂರಿನ ಮೇರೆಗೆ ವೀಡಿಯೊದಲ್ಲಿ ಕಂಡುಬರುವ ಮಹಿಳೆಯ ವಿರುದ್ಧ ಸುಲಿಗೆ ಆರೋಪದಡಿಯಲ್ಲಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಮುಂಬೈನ ಓಶಿವಾರದ ನಿವಾಸಿಯಾಗಿರುವ 32 ವರ್ಷದ ಮಹಿಳೆಯಿಂದ ತಾನು 'ಹನಿ-ಟ್ರ್ಯಾಪ್' ಆಗಿದ್ದೇನೆ ಎಂದು ದೇಶಮುಖ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments