ಅನರ್ಹ ಶಾಸಕರಿಗೆ ಟಿಕೆಟ್ ನೀಡೋ ಪ್ರಶ್ನೆಯೇ ಇಲ್ಲ ಎಂದ ಬಿಜೆಪಿ ಮುಖಂಡ

Webdunia
ಭಾನುವಾರ, 27 ಅಕ್ಟೋಬರ್ 2019 (15:03 IST)
ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ. ಹೀಗಂತ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

ಅರವಿಂದ ಲಿಂಬಾವಳಿ, ಬಿಜೆಪಿ ಕೋರ್ ಕಮೀಟಿ ಸಭೆಯ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ್ರು. ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧ ಪಟ್ಟಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯದ ಸಭೆ ನಡೆಸಿದ್ದೇವೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರನ್ನ ಗೆಲ್ಲಿಸುವುದು ಎಲ್ಲರ ಕರ್ತವ್ಯ ಎಂದರು.

   ಪಕ್ಷದ ಕಾರ್ಯಕರ್ತರಲ್ಲಿ ಬಲ ತುಂಬುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಕ್ಷೇತ್ರಗಳ ಅಭ್ಯರ್ಥಿಗಳು ಯಾರೆಂಬುದರ ಕುರಿತು ಇನ್ನೂ ನಿರ್ಧರಿಸಿಲ್ಲ. ಈಗ ಅನರ್ಹ ಶಾಸಕರ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಸುಪ್ರೀಂ ತೀರ್ಪಿನ ನಂತರ ಆಯಾ ಕ್ಷೇತ್ರಗಳಲ್ಲಿ  ಟಿಕೆಟ್ ಯಾರಿಗೆ ನೀಡಬೇಕೆಂಬುದು ತೀರ್ಮಾನ ಮಾಡಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು. 

ರಾಜೀನಾಮೆ ನೀಡಿರುವ ಶಾಸಕರು ಈವರೆಗೂ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಸೇರ್ಪಡೆಗೊಳ್ಳುತ್ತೇವೆ ಎಂದು ಹೇಳಿಲ್ಲ. ಹೀಗಾಗಿ ಅವರಿಗೆ ಟಿಕೆಟ್ ನೀಡುವಂತಹ ಪ್ರಶ್ನೆಯೇ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments