Publish Date: Mon, 24 Oct 2016 (11:23 IST)
Updated Date: Mon, 24 Oct 2016 (11:29 IST)
ವಾಯುವಿಹಾರಕ್ಕೆ ತೆರಳುತ್ತಿದ್ದಾಗ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಿಜೆಪಿ ಮುಖಂಡನ ಪುತ್ರ ಕಾರ್ತಿಕ್ ರಾಜ್(27) ಚಿಕಿತ್ಸೆ ಫಲಕಾರಿಯಾಗದೆ ದುರ್ಮರಣವನ್ನಪ್ಪಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಅವರ ಮೇಲೆ ದಾಳಿ ನಡೆದಿತ್ತು.
ಸುದರ್ಶನ ನಗರ ನಿವಾಸಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ರಾಗಿದ್ದ ಕಾರ್ತಿಕ್ ಶನಿವಾರ ಮುಂಜಾನೆ ವಾಯುವಿಹಾರಕ್ಕೆ ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದರು..
ಘಟನೆಯನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದರೂ ಪೊಲೀಸರು ಇದನ್ನು ಅಪಘಾತ ಪ್ರಕರಣವೆಂದು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಆದರೆ ವಿಷಯ ಅರಿತ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಮುಂದೆ ಗುಂಪುಗೂಡಿ ಪ್ರತಿಭಟನೆ ನಡೆಸಿದ ಬಳಿಕ ಪೊಲೀಸರು ಹತ್ಯೆಯತ್ನ ಪ್ರಕರಣವನ್ನು ದಾಖಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ