ಸಚಿವ ಖಾದರ್‌ರಿಂದ ಇಂತಹ ಕೆಟ್ಟ ಮಾತು ಬರಬಾರದು: ಬಿಜೆಪಿ

Webdunia
ಬುಧವಾರ, 1 ಮಾರ್ಚ್ 2017 (17:05 IST)
ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ ವಿರೋಧಿಸುವವರು ಚಪ್ಪಲಿಗೆ ಸಮ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿರುವುದಕ್ಕೆ ವ್ಯಂಗ್ಯವಾಡಿದ ಬಿಜೆಪಿ ವಕ್ತಾರ ಸುರೇಶ್ ಕುಮಾರ್,  ಆಹಾರ ಖಾತೆ ಸಚಿವರ ಬಾಯಿಯಲ್ಲಿಯೇ ಇಂತಹ ಮಾತುಗಳು ಬರುತ್ತವೆ ಎಂದಾದರೆ ಆಹಾರ ತಿನ್ನುವವರ ಬಾಯಿಯಲ್ಲಿ ಯಾವ ರೀತಿಯ ಮಾತುಗಳು ಬರಬಹುದು ಎಂದು ತಿರುಗೇಟು ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಸರಬರಾಜು ಮಾಡುವ ಆಹಾರ ಕಲಬೆರಿಕೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
 
ಕೇರಳ ಸಿಎಂ ಮಂಗಳೂರಿಗೆ ಭೇಟಿ ನೀಡಿದ್ದಾಗ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳು ನಡೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದವು. 
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕೇರಳ ಸಿಎಂ ವಿಜಯನ್ ಅವರಿಗೆ ಭಾರಿ ಭದ್ರತೆ ಒದಗಿಸಿ ಕಾರ್ಯಕ್ರಮ ಯಶಸ್ವಿಯಾಗಲು ಪರೋಕ್ಷ ಬೆಂಬಲ ನೀಡಿತ್ತು. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಕೋರ್ಟ್ ನಿರಪರಾಧಿ ಎಂದು ತೀರ್ಪು ನೀಡಿದೆ. ಆದರೆ,ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಜಗತ್ತು ಕಂಡ ಮಹಾಭ್ರಷ್ಟ ಎಂದು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments