Select Your Language

Notifications

webdunia
webdunia
webdunia
webdunia

ಸುಳ್ಳು ಹೇಳುವುದೇ ಬಿಜೆಪಿಯವರ ಕಾಯಕ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವುದೇ ಬಿಜೆಪಿಯವರ ಕಾಯಕ: ಸಿಎಂ ಸಿದ್ದರಾಮಯ್ಯ
ಮೈಸೂರು , ಗುರುವಾರ, 26 ಮೇ 2016 (12:29 IST)
ಮೈಸೂರು: ಕೆಪಿಎಸ್‌ಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡಿಎ ಆಯುಕ್ತ ಶ್ಯಾಂ ಭಟ್ ಪರ ಬ್ಯಾಟಿಂಗ್ ಮಾಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಶ್ಯಾಂ ಭಟ್ ನೇಮಕಾತಿ ಕುರಿತು ರಾಜ್ಯಪಾಲರು ಸ್ಪಷ್ಟನೆ ಕೇಳಿಲ್ಲ. ಶ್ಯಾಂ ಭಟ್ ಭ್ರಷ್ಟರು ಎಂದು ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು.
 
ಪ್ರತಿಪಕ್ಷ ನಾಯಕರು ಆರೋಪ ಮಾಡಿದ ತಕ್ಷಣ ಅವರು ಭ್ರಷ್ಟರಾಗಿ ಬಿಡುತ್ತಾರೆಯೇ? ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಗಳು ಎಲ್ಲಾ ನಿಜವೇ? ಬಿಜೆಪಿ ನಾಯಕರಿಗೆ ಮಾಡಲು ಕಾಯಕವಿಲ್ಲ. ಆದ್ದರಿಂದ ಸುಳ್ಳು ಹೇಳುವುದೇ ಅವರ ಕಾಯಕವಾಗಿದೆ ಎಂದು ಪ್ರತಿಪಕ್ಷ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
 
ಸಚಿವ ಸಂಪುಟ ಪುನರ್ ರಚನೆ ಮಾಡುವುದಿಲ್ಲವೆಂದು ನಾನು ಯಾವತ್ತೂ ಹೇಳಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಲಂಚ ಪ್ರಕರಣ: ಸಚಿವ ಚಿಂಚನಸೂರ್ ಕೈಬಿಡುವಂತೆ ಪ್ರಹ್ಲಾದ್ ಜೋಷಿ ಒತ್ತಾಯ