Publish Date: Sun, 03 Dec 2017 (13:04 IST)
Updated Date: Sun, 03 Dec 2017 (13:07 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂಸ್ಕಾರವಿಲ್ಲದ ಪುಡಾರಿಗಳು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ ರಾಯರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಟೀಕಿಸುತ್ತಾರೆ. ಇದು ಅವರ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯರನ್ನು ಬಚ್ಚಾ ಎನ್ನುತ್ತಾರೆ. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವೋಟಿಗಾಗಿ ಸಿಎಂ ಬೂಟು ನೆಕ್ತಾರೆ ಎನ್ನುವಂತಹ ಕೀಳು ಮಾತುಗಳನ್ನಾಡುತ್ತಾರೆ. ಇಂತಹ ನಾಯಕರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದಲ್ಲಿ ಕೇಂದ್ರ ಸರಕಾರದಿಂದ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಯಡಿಯೂರಪ್ಪ, ಇದೀಗ ಯಾಕೆ ಮೌನವಾಗಿದ್ದಾರೆ? ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಪ್ರಧಾನಿ ಮೋದಿ ಬಳಿಗೆ ತೆರಳಿ ರಾಜ್ಯದ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.