Publish Date: Sun, 07 May 2017 (17:33 IST)
Updated Date: Sun, 07 May 2017 (17:35 IST)
ಬಿಜೆಪಿ ನಾಯಕರೇ ಭ್ರಷ್ಟಾಚಾರದ ಜನಕರು. ಕಾಂಗ್ರೆಸ್ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಸಂಘಟನೆ ಹೇಗೆ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.
ಜಮೀರ್ ಅಹ್ಮದ್ ಖಾನ್ ಅವರಿಂದ ಜೆಡಿಎಸ್ ಪಕ್ಷಕ್ಕೆ ಸರ್ಟಿಫಿಕೇಟ್ ಬೇಕಾಗಿಲ್ಲ. ನಾನು ಮನಸ್ಸು ಮಾಡಿದರೆ ಮತ್ತೊಬ್ಬ ಜಮೀರ್‌ಖಾನ್‌ರನ್ನು ಹುಟ್ಟುಹಾಕುತ್ತೇನೆ ಎಂದು ಗುಡುಗಿದರು.
ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರು ಮಾತನಾಡಿಲ್ಲ. ಜೆಡಿಎಸ್ ಪಕ್ಷದ ವಿರುದ್ಧ ವದಂತಿ ಹರಡಿಸಲಾಗುತ್ತಿದೆ. ಮುಖ್ಯಮಂತ್ರಿಯವರ ಕಚೇರಿಯಲ್ಲಿಯೇ ಇಂತಹ ಸುದ್ದಿ ಹರಿಬಿಡಲಾಗುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.