Select Your Language

Notifications

webdunia
webdunia
webdunia
webdunia

ಸಿಎಂ ಮನೆಗೆ ಮುತ್ತಿಗೆಗೆ ಮುಂದಾದ ಬಿಜೆಪಿ: ಪ್ರಮುಖರು, ನೂರಾರು ಕಾರ್ಯಕರ್ತರ ಸೆರೆ

Karnataka BJP

Krishnaveni K

ಬೆಂಗಳೂರು , ಗುರುವಾರ, 3 ಏಪ್ರಿಲ್ 2025 (14:00 IST)
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು.

ಈ ಕರೆಯಂತೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.
ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜ್, ಪ್ರಮುಖರಾದ ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್ ಮೊದಲಾದವರಲ್ಲದೆ, ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು ಬಿಜೆಪಿ ಹೋರಾಟ ಮುಂದುವರೆಯಲಿದೆ; ಇದೇ 7ರಿಂದ ಜನಾಕ್ರೋಶ ರ್ಯಾಲಿ ನಡೆಸಲಿದ್ದೇವೆ ಎಂದು ತಿಳಿಸಿದರು.
 
 
 

Share this Story:

Follow Webdunia kannada

ಮುಂದಿನ ಸುದ್ದಿ

Waqf Bill: ಮುಸ್ಲಿಮರೇ ಟಾರ್ಗೆಟ್, ಆರ್ ಎಸ್ಎಸ್, ಬಿಜೆಪಿಯಿಂದ ಸಂವಿಧಾನದ ಮೇಲೆ ಅಟ್ಯಾಕ್: ರಾಹುಲ್ ಗಾಂಧಿ