Webdunia - Bharat's app for daily news and videos

Install App

ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಬ್ರೈನ್ ವಾಶ್ ಮಾಡಿದ್ದಾರೆ- ದಿನೇಶ್ ಗುಂಡೂರಾವ್

Webdunia
ಭಾನುವಾರ, 20 ಜನವರಿ 2019 (06:52 IST)
ಬೆಂಗಳೂರು : ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿ ನಾಯಕರು ಬ್ರೈನ್ ವಾಶ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.


ರೆಸಾರ್ಟಿನಲ್ಲಿ ಏರ್ಪಡಿಸಿದ್ದ ಸಭೆಯ ಬಳಿಕ ಮಾತನಾಡಿದ ಅವರು, ‘ನಮ್ಮ ಶಾಸಕರ ವಿರುದ್ಧ ಬಿಜೆಪಿ ನಾಯಕರು ಕುತಂತ್ರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಹಾಗು ರಾಷ್ಟ್ರ ನಾಯಕರ ಸಹಾಯದಿಂದಲೇ ಕೃತ್ಯ ನಡೆದಿದೆ. ನಮ್ಮ ಶಾಸಕರಿಗೆ ಆಸೆ ತೋರಿಸಿ ಬ್ರೈನ್ ವಾಶ್ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.


‘ಸಿಎಲ್‍ಪಿ ಸಭೆಗೆ ಗೈರಾದ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ಈಗಲೂ ರಮೇಶ್ ಜಾರಕಿಹೊಳಿ ಅವರು ಪಕ್ಷದಲ್ಲೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ. ಏಕೆಂದರೆ ಅವರು 1999 ರಿಂದಲೂ ನನ್ನೊಂದಿಗೆ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ. ಸೂಕ್ತ ಉತ್ತರ ನೀಡದಿದ್ದರೆ, ಪಕ್ಷ ಕ್ರಮಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

ಮುಂದಿನ ಸುದ್ದಿ
Show comments