Publish Date: Mon, 16 Apr 2018 (09:10 IST)
Updated Date: Mon, 16 Apr 2018 (09:12 IST)
ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಕರಣಕ್ಕೆ ಜಾತಿ ಬಣ್ಣ ಅಂಟಿಕೊಂಡಿದೆ.
ಸಿಎಂ ಯೋಗಿ ಮೇಲೆ ಹಲ್ಲೆ ನಡೆಸುವಂತೆ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ ಒಂದು ರಾಜ್ಯದ ಮುಖ್ಯಮಂತ್ರಿಗೆ ಮಾಡಿದ ಅವಮಾನ ಮಾತ್ರವಲ್ಲ, ಇಡೀ ನಾಥ್ ಸಮುದಾಯಕ್ಕೆ ಮಾಡಿದ ಅವಮಾನ.
ಆದಿಚುಂಚನಗಿರಿಯ ಮಠಾಧೀಶರು ಮತ್ತು ಸಿಎಂ ಯೋಗಿ ನಾಥ್ ಕುಟುಂಬಕ್ಕೆ ಸೇರಿದವರು. ದಿನೇಶ್ ಗುಂಡೂರಾವ್ ಇದೀಗ ಇಬ್ಬರಿಗೂ ಅವಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಆರೋಪಿಸಿದ್ದಾರೆ.
ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೂಡಾ ಇದೇ ರೀತಿಯ ಮಾತನಾಡಿದ್ದಾರೆ. ಕರ್ನಾಟಕದಲ್ಲಿರುವ ಹಲವಾರು ನಾಥ ಕುಟುಂಬಕ್ಕೆ ಸೇರಿದ ಜನರು ದಿನೇಶ್ ಗುಂಡೂರಾವ್ ಮತ್ತು ಕಾಂಗ್ರೆಸ್ ನ್ನು ಕ್ಷಮಿಸಲಾರರು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಹಲವು ಬಿಜೆಪಿ ನಾಯಕರಿಂದ ದಿನೇಶ್ ಗುಂಡೂರಾವ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.