Publish Date: Sat, 18 Nov 2017 (17:24 IST)
Updated Date: Sat, 18 Nov 2017 (17:27 IST)
ಕಳೆದ ನಾಲ್ಕುವರೆ ವರ್ಷಗಳಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಅಡಳಿತ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ನಡೆದ ಯಾವುದೇ ಭ್ರಷ್ಟಾಚಾರವನ್ನು ಸಾಬೀತುಪಡಿಸಿದಲ್ಲಿ ರಾಜಕೀಯ ಮಾತನಾಡುವುದನ್ನು ಬಿಟ್ಟು ಬಿಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಸರಕಾರವನ್ನು ಟೀಕಿಸುವ ಮೊದಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಿ, ಮಹದಾಯಿ ವಿವಾದ ಇತ್ಯರ್ಥಗೊಳಿಸಲಿ ಎಂದು ಗುಡುಗಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ನಮ್ಮ ಸರಕಾರ ಮಾಡಿದ ಅಭಿವೃದ್ಧಿಯ ಬಗ್ಗೆ ಬಹಿರಂಗ ಚರ್ಚೆಯಾಗಲಿ. ತಾಕತ್ತಿದ್ರೆ ಚರ್ಚೆಗೆ ಬನ್ನಿ, ಬಿಜೆಪಿ ನಾಯಕರಿಗೆ ದಮ್ ಇಲ್ಲ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.