Select Your Language

Notifications

webdunia
webdunia
webdunia
webdunia

ಸಿಟಿ ರವಿಯನ್ನು ಬೆಂಗಳೂರಿಗೆ ಕರೆದೊಯ್ಯುವ ಪೊಲೀಸರ ಹಿಂಬಾಲಿಸಿದ ಬಿಜೆಪಿ ನಾಯಕರು: ವಿಡಿಯೋ

CT Ravi

Krishnaveni K

ಬೆಳಗಾವಿ , ಶುಕ್ರವಾರ, 20 ಡಿಸೆಂಬರ್ 2024 (15:08 IST)
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಪ್ರಯೋಗ ಮಾಡಿದ ತಪ್ಪಿಗೆ ಬಿಜೆಪಿ ಶಾಸಕ ಸಿಟಿ ರವಿಯವರನ್ನು ಪೊಲೀಸರು ಬಂಧಿಸಿದ್ದು ಇಂದು ಕೋರ್ಟ್ ಗೆ ಹಾಜರುಪಡಿಸಿದ ಬಳಿಕ ಬೆಂಗಳೂರಿಗೆ ಕರೆತರಲಾಗುತ್ತಿದೆ.

ನಿನ್ನೆ ರಾತ್ರಿ ಸಿಟಿ ರವಿ ಬಂಧನವಾಗಿತ್ತು. ಅದಾದ ಬಳಿಕ ಅವರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ವೇಳೆ ಕೋರ್ಟ್ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಸ್ತಾಂತರಿಸಿದೆ.

ಶಾಸಕರ ವಿಚಾರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಕೋರ್ಟ್ ಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಹೀಗಾಗಿ ಬೆಳಗಾವಿಯಿಂದ ಪೊಲೀಸರು ತಮ್ಮ ವಾಹನದಲ್ಲಿ ಸಿಟಿ ರವಿಯವರನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಇನ್ನು, ನಿನ್ನೆ ಸಿಟಿ ರವಿಯವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರು ಕಿರುಕುಳ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಸಿಟಿ ರವಿ ವಾಹನದ ಹಿಂದೆಯೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ದಂಡೂ ಕಾರಿನಲ್ಲಿ ಪೊಲೀಸರ ವಾಹನವನ್ನು ಹಿಂಬಾಲಿಸಿದೆ. ರಾತ್ರಿ ವೇಳೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ