Publish Date: Sun, 26 Feb 2023 (08:21 IST)
Updated Date: Sun, 26 Feb 2023 (09:22 IST)
ಬೆಳಗಾವಿ : ಪ್ರಧಾನಿ ಮೋದಿ ಆಗಮನದಿಂದ ಬೆಳಗಾವಿ ಬಿಜೆಪಿಯಲ್ಲಿ ಹೊಸ ಚೈತನ್ಯ ಬಂದಿದ್ದು, ಪೂರ್ವಸಿದ್ಧತಾ ಸಭೆಯಲ್ಲಿ ವೈಮನಸ್ಸು ಮರೆತು ಬಿಜೆಪಿ ನಾಯಕರು ಒಂದಾಗಿದ್ದಾರೆ.
ನಗರದ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿ ಎಂಎಲ್ಸಿ ಕೇಶವಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಣಿಸಿಕೊಂಡಿದ್ದಾರೆ.
ಫೆ.27ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಬೆಳಗಾವಿ ಜಿಲ್ಲಾ ಬಿಜೆಪಿ ಪ್ರಮುಖ ನಾಯಕರಿಂದ ಪೂರ್ವಸಿದ್ಧತಾ ಸಭೆಯಲ್ಲಿ ಬೆಳಗಾವಿ ನಗರ, ಗ್ರಾಮಾಂತರ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪ್ರಮುಖ ನಾಯಕರು, ಪದಾಧಿಕಾರಿಗಳು ಭಾಗಿಯಾಗಲಿದ್ದರು.