Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು , ಗುರುವಾರ, 15 ಸೆಪ್ಟಂಬರ್ 2022 (16:03 IST)
ಬಿಜೆಪಿ ಮುಖಂಡ ಹಾಗೂ ಎಪಿಎಂಸಿ ಮಾಜಿ ಸದಸ್ಯ ರುದ್ರಗೌಡ ಪಾಟೀಲ್‌ ನಂದಿಹಳ್ಳಿ ಅವರು ಬಿಜೆಪಿ ತೊರೆದು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬುಧವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದರು. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರುದ್ರಗೌಡ ಪಾಟೀಲ್‌ ನಂದಿಹಳ್ಳಿ ಸೇರಿದಂತೆ ಅವರ ಆಪ್ತರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಭಯ್ಯಾಪುರ ಮತ್ತು ವಿಧಾನಪರಿಷತ್‌ ಸದಸ್ಯ ಶರಣೇಗೌಡ ಭಯ್ಯಾಪುರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕನಕಗಿರಿ ಕ್ಷೇತ್ರದ ಬಿಜೆಪಿಯಲ್ಲಿ ಉಸಿರುಗಟ್ಟುವಂಥ ವಾತಾವರಣವಿದೆ. ಇನ್ನು ಈ ನಾಲ್ಕೂವರೆ ವರ್ಷಗಳಲ್ಲಿ ಬಿಜೆಪಿ ಮತ್ತು ಶಾಸಕ ಬಸವರಾಜ ದಢೇಸೂಗೂರು ಇವರಿಂದ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಗಳು ಹುಸಿಯಾಗಿದ್ದು, ಅವರಲ್ಲಿ ದೂರದೃಷ್ಟಿಯ ಕೊರತೆ ಎದ್ದು ಕಾಣುತ್ತಿದ್ದರಿಂದ ತಕ್ಷಣವೇ ಎಚ್ಚೆತ್ತು ಮರಳಿ ಕಾಂಗ್ರೆಸ್‌ ಸೇರಲು ನಿರ್ಧರಿಸಿದೆ ಎಂದು ರುದ್ರಗೌಡ ನಂದಿಹಳ್ಳಿ ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಶ್ರೀಲೀಲಾ ತಾಯಿಗೆ ಸಂಕಷ್ಟ