Publish Date: Sat, 22 Sep 2018 (11:57 IST)
Updated Date: Sat, 22 Sep 2018 (11:59 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಏಳಲು ಕರೆ ಕೊಡುತ್ತೆನೆ ಎಂದು ನೀಡಿದ್ದ ಹೇಳಿಕೆ ವಿಚಾರ ಪ್ರಮುಖವಾಗಿ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಈ ಹೇಳಿಕೆಯ ರಾಜಕೀಯ ಲಾಭ ಪಡೆಯುವುದರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಭೆಯಲ್ಲಿ ಬಿಎಸ್ ವೈ ಜತೆಗೆ ಶೋಭಾ ಕರಂದ್ಲಾಜೆ, ಅಯನೂರು ಮಂಜುನಾಥ್, ಬಿವೈ ರಾಘವೇಂದ್ರ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ಈ ನಡುವೆ ದಂಗೆ ಹೇಳಿಕೆ ಕುರಿತಂತೆ ಬಿಜೆಪಿ ರಾಜ್ಯಾಪಾಲರಿಗೆ ದೂರು ನೀಡಿರುವ ವರದಿಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಗೆ ಸಲ್ಲಿಸುವ ಮೂಲಕ ಹೈಕಮಾಂಡ್ ಗಮನಕ್ಕೆ ತಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.