Publish Date: Sun, 14 Jan 2024 (16:42 IST)
Updated Date: Sun, 14 Jan 2024 (16:45 IST)
ಬೆಂಗಳೂರು : ಬಿಜೆಪಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಭಾನುವಾರ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಪದ್ಮನಾಭಗರದ ಅವರ ಸ್ವಗೃಹಕ್ಕೆ ತೆರಳಿದ ಬಿಜೆಪಿ ನಾಯಕರು ಅವರೊಡನೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಘೋಷಿಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಜಂಟಿಯಾಗಿ ಪ್ರಚಾರ ಕಾರ್ಯವನ್ನೂ ಸಹ ಪ್ರಾರಂಭಿಸಿದೆ.
ಸಂಕ್ರಾಂತಿ ಕಳೆದ ಬಳಿಕ ಸೀಟು ಹಂಚಿಕೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಹೇಳಿಕೆ ನೀಡಿದ್ದರು. ಹೀಗಾಗಿ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಾಬಲ್ಯದ ಕುರಿತು ಮಾತುಕತೆ ನಡೆಸಿರುವ ನಿರೀಕ್ಷೆಯಿದೆ.ಜೆಡಿಎಸ್ ಮುಖಂಡ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಕೂಡ ಈ ವೇಳೆ ಜೊತೆಗಿದ್ದರು.