Publish Date: Wed, 20 Dec 2017 (15:51 IST)
Updated Date: Wed, 20 Dec 2017 (15:59 IST)
ವಿಜಯಪುರ: ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಾ ಮಹದಾಯಿ ವಿಚಾರದಲ್ಲಿ ಅವರು ಕಣ್ಣೀರು ಒರೆಸುವ ನಾಟಕವಾಡಿ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುದ್ದೇಬಿಹಾಳ ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶಕ್ಕೂ ಮೊದಲು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ಪ್ರಧಾನಿ ಮೋದಿಯವರ ಬಳಿ ಹೋಗಿ ಮಹದಾಯಿ ಸಮಸ್ಯೆ ಯನ್ನು ಪರಿಹರಿಸುವ ಬಗ್ಗೆ ಹಲವು ಬಾರಿ ಮನವಿ ಮಾಡಿಕೊಂಡರೂ, ಇಲ್ಲಿಯವರೆಗೆ ಇತ್ಯರ್ಥವಾಗದೆ, ಚುನಾವಣೆ ಹಿನ್ನೆಲೆಯಲ್ಲಿ ಪರಿಹಾರ ಕ್ರಮ ಕೈಗೊಳ್ಳುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ಕುತಂತ್ರ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ