Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ರಾಜ್ಯದಲ್ಲಿ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಬೆಂಗಳೂರು , ಗುರುವಾರ, 28 ಜುಲೈ 2022 (14:13 IST)
ಹತ್ಯೆ ನಂತರ ರಾಜ್ಯಾದ್ಯಂತ ಅನೇಕ ಯುವ ಮುಖಂಡರು ತಮ್ಮ ಪಕ್ಷದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಪರ್ವ ಮುಂದುವರಿದಿದ್ದು, ವಿಜಯಪುರ ಜಿಲ್ಲೆಯ ಜಿಲ್ಲಾ ಸಾಮಾಜಿಕ ಜಾಲ ತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ ಪಾಟೀಲ್ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
 
ಪ್ರವೀಣ್ ಹತ್ಯೆ ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ನಡೆದ ಕೊಲೆಗಳಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂದು ನಮ್ಮ ಕಣ್ಣಮುಂದೆ ಇದೆ. ಕಠಿಣ ಕ್ರಮದ ಭರವಸೆ ಭರವಸೆಯಾಗಿಯೇ ಉಳಿದ ಕಾರಣ ಸಾಮೂಹಿಕ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿ ರಾಜೀನಾಮೆ ಪತ್ರವನ್ನು ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ.
 
ಬಿಜೆಪಿ ಇದೊಂದು ಕೇವಲ ರಾಜಕೀಯ ಪಕ್ಷವಲ್ಲ, ಈ ಪಕ್ಷಕ್ಕೆ ತನ್ನದೇ ಆದಂತಹ ಇತಿಹಾಸ ಇದೆ. ವಿಚಾರ ಸಿದ್ದಾಂತಗಳಿಗಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂತಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದು ಒದಗಿರುವುದು ಕಾರ್ಯಕರ್ತರಿಗೆ ನೋವಾಗುತ್ತದೆ. ಹಿಂದೆಲ್ಲ ನಡೆದಂತಹ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣ ಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿ ಉಳಿದಿರುವ ಕಾರಣ ವಿಜಯಪುರ ಜಿಲ್ಲಾ ಸಮಿತಿ ಹಾಗೂ ಒಂಬತ್ತು ಮಂಡಳಗಳ ಪೂರ್ವ ಸಮಿತಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ. ಧನ್ಯವಾದಗಳು ಎಂದು ರಾಜೀನಾಮೆ ಪತ್ರದಲ್ಲಿ ಬರೆಯಲಾಗಿದೆ. ಆದರೆ, ಜಿಲ್ಲಾಧ್ಯಕ್ಷರು ರಾಜೀನಾಮೆಯನ್ನು ಅಂಗೀಕರಿಸಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಲವ್ವಿ ಡವ್ವಿ ವ್ಯವಹಾರ ನಿಲ್ಲಿಸಿದ್ದಕ್ಕೆ ಅತ್ತಿಗೆಯ ಕೊಂದ ಬಾವ