ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರಕ್ಕ ಸಂಬಂಧಿಸಿದಂತೆ ಕೋಡಿಹಳ್ಳಿ ವಿರುದ್ಧ ಸಚಿವ ಸೋಮಣ್ಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣ, ನೌಕರರ ಜತೆ ಕೋಡಿಹಳ್ಳಿ ಚೆಲ್ಲಾಟ ಆಡ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಗೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕೋಡಿ ಹುಳಿ ಅನ್ನ ಬಳಸಿಕೊಂಡು ಕನಸು ಕಾಣ್ತಿದ್ದಾರೆ. ಕೆಲ ನಾಯಕರು ಅಧಿಕಾರಕ್ಕೆ ಬರುವ ಕನಸು ಕಾಣ್ತಿದ್ದಾರೆ. ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.