ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಅನ್ಯಕೋಮಿನ ಫಯಾಜ್ ಎಂಬ ಯುವಕನಿಂದ ಹತ್ಯೆಗೀಡಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಕುಟುಂಬಸ್ಥರನ್ನು ಬಿಜೆಪಿ ನಾಯಕರು ಇಂದು ಭೇಟಿ ಮಾಡಿದ್ದಾರೆ.
ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ಆಗಿದ್ದಾರೆ. ಅವರ ಮನೆಗೆ ಇಂದು ಬಿಜೆಪಿ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಏಪ್ರಿಲ್ 18 ರಂದು 21 ವರ್ಷದ ನೇಹಾಳನ್ನು ಕಾಲೇಜು ಆವರಣದಲ್ಲಿ ಫಯಾಜ್ ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ.
ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕಾಂಗ್ರೆಸ್ ನಾಯಕರ ವಿರುದ್ಧವೇ ನಿರಂಜನ್ ಹಿರೇಮಠ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪ್ರಕರಣವನ್ನು ಸಿಒಡಿಗೆ ಒಪ್ಪಿಸಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಕೂಡಾ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.
ಇದೀಗ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ, ನಿರಂಜನ ಹಿರೇಮಠ ಕುಟುಂಬಕ್ಕೆ ಸಮತ್ವನ ಹೇಳಿದರು.