Select Your Language

Notifications

webdunia
webdunia
webdunia
webdunia

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

Tejasvi Surya
ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ತೇಜಸ್ವಿ ಸೂರ್ಯರನ್ನು ವಶಕ್ಕೆ ಪಡೆದಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ‘ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಜೆಪಿ ಅವರನ್ನು ಪೊಲೀಸ್ ವಶಕ್ಕೆ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಜಾಪ್ರಭುತ್ವದ ಕರಾಳ ಅಣಕ, ವಾಕ್ ಸ್ವಾತಂತ್ರ್ಯದ ದಮನ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಯ ಪರಮಾವಧಿ! ಇದನ್ನು ನಾನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಮೆಟ್ರೋ ದರ ಏರಿಕೆಯ ಮೂಲಕ ಜನಸಾಮಾನ್ಯರನ್ನು ಲೂಟಿ ಮಾಡಲು ಹುನ್ನಾರ ನಡೆಸಿದ್ದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ವಿರೋಧಿಸಿ ಜನರ ಧ್ವನಿಯಾಗಿ ಪ್ರತಿಭಟಿಸುವುದು ಈ ಹಿಟ್ಲರ್ ಸರ್ಕಾರದಲ್ಲಿ ಅಪರಾಧವಾಗಿದೆ. 

ಜನಪರ ಧ್ವನಿಯನ್ನು ಹತ್ತಿಕ್ಕಲು, ಬಿಜೆಪಿ ನಾಯಕರನ್ನು ಬಂಧಿಸಿರುವುದು ಅಕ್ಷಮ್ಯ. ಆ ಮೂಲಕ ಸತ್ಯವನ್ನು ಹತ್ತಿಕ್ಕಬಹುದು ಎಂದುಕೊಂಡಿದ್ದರೆ ಅದು ಸರ್ಕಾರದ ಭ್ರಮೆ. ಕೇಂದ್ರ ಸರ್ಕಾರದ ಮಧ್ಯಪ್ರವೇಶದಿಂದ ಮೆಟ್ರೋ ದರ ಏರಿಕೆ ಸದ್ಯಕ್ಕೆ ತಡೆಹಿಡಿಯಲ್ಪಟ್ಟಿದ್ದರೂ, ಈ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ನಿಲ್ಲುತ್ತಿಲ್ಲ. ನಿಮ್ಮ ಹಿಟ್ಲರ್ ಶಾಹಿಯಿಂದ ನಿಮ್ಮ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ಅಧಿಕಾರದ ಮದದಲ್ಲಿ ಜನಾಕ್ರೋಶವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ, ಪ್ರಜಾತಂತ್ರದ ಹಕ್ಕುಗಳನ್ನು ಎತ್ತಿಹಿಡಿಯಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ, ಸಾರ್ವಜನಿಕರೂ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ’ ಎಂದಿದ್ದಾರೆ.

ಆರ್ ಅಶೋಕ್ ಪ್ರತಿಕ್ರಿಯಿಸಿದ್ದು ‘ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ನೀತಿಗೆ ಧಿಕ್ಕಾರ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಖಾಲಿ ಟ್ರಂಕ್ ತೋರಿಸಿ ಪ್ರತಿಭಟನೆ ಮಾಡುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಬಿಜೆಪಿ ಅವರನ್ನು ಪೊಲೀಸರು ಬಂಧಿಸಿರುವುದು ಅತ್ಯಂತ ಖಂಡನೀಯ.ಸ್ವಯಂಘೋಷಿತ ಸಂವಿಧಾನ ರಕ್ಷಕ ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕದಲ್ಲಿ ಸಂಸದರಿಗೆ ಪ್ರತಿಭಟಿಸುವ ಹಕ್ಕು ಇಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಮರಾಜ ರಜಾದಲ್ಲಿದ್ದ ಅನಿಸುತ್ತೆ.. ಅದಕ್ಕೇ ಬದುಕಿದ ಬೈಕ್ ರೈಡರ್ video