Select Your Language

Notifications

webdunia
webdunia
webdunia
webdunia

ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಹೋಗುವೆ ಎಂದ ಬಿಜೆಪಿ ಶಾಸಕ

ಸುಮಲತಾ ಅಂಬರೀಶ್ ಪರವಾಗಿ ಪ್ರಚಾರಕ್ಕೆ ಹೋಗುವೆ ಎಂದ ಬಿಜೆಪಿ ಶಾಸಕ
ಶಿವಮೊಗ್ಗ , ಬುಧವಾರ, 20 ಮಾರ್ಚ್ 2019 (08:23 IST)
ಶಿವಮೊಗ್ಗ : ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೀಯುತ್ತಿರುವ  ಸುಮಲತಾ ಅಂಬರೀಶ್ ಅವರ  ಪರವಾಗಿ  ಬಿಜೆಪಿ ಶಾಸಕರೊಬ್ಬರು ಪ್ರಚಾರಕ್ಕೆ ಹೋಗುವುದಾಗಿ ಹೇಳುವುದರ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.


ಮಂಡ್ಯ ಕ್ಷೇತ್ರದಿಂದ  ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಸುಮಲತಾ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಆದರೆ ಕೊನೆಗೆ ಸುಮಲತಾ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಂಡಿದ್ದಾರೆ.


ಈ ಕುರಿತು ಮಾತನಾಡಿದ ಸೊರಬ ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ಅವರು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ತೆಗೆದುಕೊಂಡ ನಿರ್ಧಾರ ಸೂಕ್ತವಾಗಿದೆ. ಮಂಡ್ಯದಲ್ಲಿ ಸುಮಲತಾ ಪರ ಅವಕಾಶ ಸಿಕ್ಕರೆ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದ ಮೊದಲ ಲೋಕಪಾಲ್ ಆಗಿ ನಿವೃತ್ತ ನ್ಯಾ. ಪಿ.ಸಿ.ಘೋಷ್ ನೇಮಕ