Publish Date: Sun, 03 Dec 2017 (12:16 IST)
Updated Date: Sun, 03 Dec 2017 (12:18 IST)
ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಒಲವು ತೋರಿಸಿದ್ದು, ಜನವರಿಯ ವೇಳೆಗೆ ನಿಚ್ಚಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ವಾಸ್ತವಾಂಶ ಅಂದರೆ, ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷದಿಂದ ಯಾವೊಬ್ಬ ಶಾಸಕನು ಬಿಜೆಪಿಯತ್ತ ತಲೆಹಾಕಿ ಮಲಗದುವುದಿಲ್ಲ. ಅಂತಹ ಪಕ್ಷಕ್ಕೆ ಸೇರ್ಪಡೆಯಾಗಿ ಅವರ ಭವಿಷ್ಯ ಕಳೆದುಕೊಳ್ಳಲು ಸಿದ್ದರಿಲ್ಲ ಎಂದು ಕಿಡಿಕಾರಿದರು.
ನಾನು ಯಾವತ್ತು ಸಭ್ಯತೆಯ ಮಿತಿಮೀರಿ ಮಾತನಾಡಿಲ್ಲ. ಬಿಜೆಪಿ ನಾಯಕರು ಯಾವ ರೀತಿಯ ಭಾಷೆ ಬಳಸುತ್ತಿದ್ದಾರೆ ಎನ್ನುವುದು ರಾಜ್ಯದ ಜನತೆ ನೋಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.