ಅಭಿಷೇಕ್ ರಾಜಕೀಯ ಪ್ರವೇಶಕ್ಕೆ ಬಿಜೆಪಿ ಮಾಸ್ಟರ್ ಪ್ಲಾನ್!

Webdunia
ಶನಿವಾರ, 7 ಮೇ 2022 (12:09 IST)
ಬೆಂಗಳೂರು : ಮಂಡ್ಯದಲ್ಲಿ ಬಿಜೆಪಿ ಸಂಘಟನೆಗೆ ಯುವ ನಾಯಕತ್ವ ಬರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಆ ಯುವ ನಾಯಕ ಯಾರು ಎಂಬ ಪ್ರಶ್ನೆ ಈಗ ಎದ್ದಿದೆ.
 
ಮಂಡ್ಯದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ. ಕಳೆದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಜಯಭೇರಿ ಭಾರಿಸಿತ್ತು.

ಜೆಡಿಎಸ್, ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಮಲ ಅರಳುವುದು ಕಷ್ಟ. ಆದರೆ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲೇಬೇಕೆಂದು ಬಿಜೆಪಿ ಹೈಕಮಾಂಡ್ ಪಣ ತೊಟ್ಟಿದೆ. ಈ ಕಾರಣಕ್ಕೆ ಯುವ ನಾಯಕನ್ನು ಕರೆ ತರಲು ಬಿಜೆಪಿ ಮುಂದಾಗಿದೆ.

ಯುವ ನಾಯಕ ಮಾತುಗಾರನಾಗಿರಬೇಕು ಮತ್ತು ರಾಜಕೀಯ ಗೊತ್ತಿರಬೇಕು. ಈ ಅರ್ಹತೆ ಇರುವ ವ್ಯಕ್ತಿಯನ್ನು ಹುಡುಕುತ್ತಿರುವ ಬಿಜೆಪಿ ನಾಯಕರ ಕಣ್ಣಿಗೆ ಅಭಿಷೇಕ್ ಅಂಬರೀಶ್ ಕಾಣಿಸಿದ್ದಾರೆ.  ಮಂಡ್ಯದಲ್ಲಿ ಬಿಜೆಪಿ ಸಂಘಟನೆಗೆ ಯುವ ನಾಯಕತ್ವ ಬರುತ್ತದೆ ಎಂದು ಸಿಎಂ ಹೇಳಿದ್ದರು.

ಈ ಯುವ ನಾಯಕ ಯಾರು ಎಂದು ಹೇಳಿರಲಿಲ್ಲ. ಈಗ ಬಂದಿರುವ ಮಾಹಿತಿ ಪ್ರಕಾರ ಅಭಿಷೇಕ್ ಅವರನ್ನು ಬಿಜೆಪಿಗೆ ಸೆಳೆಯಲು ಮಾತುಕತೆ ನಡೆಯುತ್ತಿರುವ ವಿಚಾರ ತಿಳಿದು ಬಂದಿದೆ.

ಈ ಹಿಂದೆ ಪ್ರತಿಕ್ರಿಯಿಸಿದ್ದ ಬಿಜೆಪಿ ಶಾಸಕ ಯೋಗೇಶ್ವರ್, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಮ್ಮ ಪಕ್ಷ ಅವರಿಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಸುಮಲತಾ ಅವರಿಗೆ ಆಹ್ವಾನ ಮಾಡಿದ್ದೇವೆ. ಮದುವೆ ಸಮಾರಂಭದಲ್ಲಿ ಅವರನ್ನ ಭೇಟಿ ಮಾಡಿದ್ದೆವು, ಸಿಎಂ ಸಹ ಇದ್ದರು. ಅವರು ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡೋಣ ಎಂದು ತಿಳಿಸಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೆಚ್ಚುತ್ತಿರುವ H3N2 ಪ್ರಕರಣ, ಏನ್ ಲಕ್ಷಣ ಗೊತ್ತಾ

Karnataka Weather: ಬೆಂಗಳೂರಿನಲ್ಲಿ ಇಂದು ವರುಣನ ಆಗಮನವಿದೆಯೇ

Karur Stampede: ಮೃತರ ಸಂಖ್ಯೆ 39ಕ್ಕೆ ಏರಿಕೆ, 35 ಮಂದಿಯ ಗುರುತು ಪತ್ತೆ

Karur Stampede: Arrest Vijay ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಕೂಗು

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಮುಂದಿನ ಸುದ್ದಿ
Show comments