‘ಬಿಜೆಪಿಯವರು ನನ್ನನ್ನು ರಹಸ್ಯವಾಗಿ ಭೇಟಿಯಾಗ್ತಾರೆ’

Webdunia
ಸೋಮವಾರ, 10 ಅಕ್ಟೋಬರ್ 2022 (19:28 IST)
ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುಜರಾತ್ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಈ ವರ್ಷದ ಡಿಸೆಂಬರ್‌ನಲ್ಲಿ ಗುಜರಾತ್​ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಗುಜರಾತ್​ನಲ್ಲಿ ತಮ್ಮ ಆಮ್ ಆದ್ಮಿ ಪಕ್ಷದ ಪ್ರಚಾರದ ನಡುವೆಯೇ ಅರವಿಂದ್ ಕೇಜ್ರಿವಾಲ್ BJP ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಗುಜರಾತ್‌ನಲ್ಲಿ BJPಯ ಬಹಳಷ್ಟು ಕಾರ್ಯಕರ್ತರು ಮತ್ತು ಮುಖಂಡರು ನನ್ನನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು ಸೋಲಬೇಕೆಂದು ಆ BJP ಕಾರ್ಯಕರ್ತರು ಮತ್ತು ನಾಯಕರು ಆಮ್ ಆದ್ಮಿ ಪಕ್ಷಕ್ಕೆ ಗುಟ್ಟಾಗಿ ಸಹಾಯ ಮಾಡುತ್ತಿದ್ದಾರೆ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ BJPಯ ಬದಲು ಆಮ್ ಆದ್ಮಿ ಪಕ್ಷಕ್ಕೆ ಸಹಾಯ ಮಾಡುವುದಾಗಿ ಅವರು ನನಗೆ ಹೇಳಿದ್ದಾರೆ. ಅಲ್ಲದೆ, ಆಮ್ ಆದ್ಮಿ ಪಕ್ಷಕ್ಕಾಗಿ ರಹಸ್ಯವಾಗಿ ಕೆಲಸ ಮಾಡಲು ಮತ್ತು ಗುಜರಾತ್​​ನಲ್ಲಿ ಆಡಳಿತ ಪಕ್ಷ BJPಯನ್ನು ಸೋಲಿಸಲು ಕೆಲಸ ಮಾಡಲು ಗುಜರಾತ್‌ನ ಎಲ್ಲಾ BJP ನಾಯಕರನ್ನು ಆಹ್ವಾನಿಸುತ್ತಿದ್ದೇನೆ ಎಂದು AAP ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತಿನ ಬುಡಕಟ್ಟು ಪ್ರಾಬಲ್ಯದ ವಲ್ಸಾದ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಈ ಹೇಳಿಕೆಗಳನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments