ಕೋವಿಡ್ ಲಾಕ್ ಡೌನ್ ಬಜೆಪಿಯಲ್ಲಿ ಅಪಸ್ವರ

Webdunia
ಗುರುವಾರ, 6 ಜನವರಿ 2022 (16:48 IST)
ಸಾರ್ವಜನಿಕ ವಲಯ ಮತ್ತು ಸ್ವಪಕ್ಷದಲ್ಲೇ ತೀವ್ರ ವಿರೋಧ ವ್ಯಕ್ತವಾದ ಕಾರಣ ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯಾದ್ಯಂತ ತೆಗೆದುಕೊಂಡಿರುವ ಕಠಿಣ ನಿಯಮಗಳನ್ನು ಪುನರ್ ಪರಿಶೀಲಿಸಲು ಮುಂದಾಗಿದೆ.
 
ಜ.15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ ನಿಯಮಗಳನ್ನು ಸಡಿಲಗೊಳಿಸುವ ಬಗ್ಗೆ ತೀರ್ಮಾನಿಸಲಿದ್ದಾರೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ನಿಯಮಗಳನ್ನು ರಾಜ್ಯಾದ್ಯಂತ ಜಾರಿ ಮಾಡಿರುವುದಕ್ಕೆ ಸಂಪುಟದ ಅನೇಕ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ 15ರಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಿಎಂ ಚರ್ಚೆ ನಡೆಸಿದ ಬಳಿಕ ಪಾಸಿಟಿವಿಟ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಾಲಿ ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ.
 
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಬೆಂಗಳೂರು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜಧಾನಿಯಲ್ಲೇ ಶೇ.80ರಷ್ಟು ದೈನಂದಿನ ಪ್ರಕರಣಗಳು ದಾಖಲಾಗುತ್ತಿವೆ. ಬೇರೆ ಜಿಲ್ಲೆಗಳಿಗೂ ಈ ಮಾರ್ಗಸೂಚಿಯನ್ನು ಅಳವಡಿಸುವುದು ಬೇಡ ಎಂದು ಹೇಳಿದ್ದಾರೆ.
 
ಜ.15ರಂದು ಮತ್ತೊಮ್ಮೆ ಕೋವಿಡ್ ಸಭೆ ಕರೆಯಲಾಗುವುದು. ಅಲ್ಲಿಯವರೆಗೆ ಎಷ್ಟು ಪ್ರಕರಣಗಳು ಬರುತ್ತವೆ ಎಂದು ನೋಡಿಕೊಂಡು ಸರ್ಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments