ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಲ್ಪಸಂಖ್ಯಾತ ಯುವಮೋರ್ಚಾ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಅಜೀಂ ಅಧಿಕಾರ ಸ್ವೀಕರಿಸಿದರು. ಈ ಸಮಾರಂಭದಲ್ಲಿ ಮಾಜಿ ಡಿಸಿಎಂ ಆರ್. ಆಶೋಕ್ ಮತ್ತು ಮಾಜಿ ಎಮ್‌ಎಲ್‌ಸಿ ಡಿ.ಎಸ್ ವೀರಯ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಆರ್ ಅಶೋಕ್, ಸಮಾಜದಲ್ಲಿ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಬೇಕು. ಅವರ ಕುಂದು ಕೊರತೆಗಳನ್ನು ಅರಿತುಕೊಳ್ಳಬೇಕು. ಮುಂಬರುವ ಚುನಾವಣೆಯಲ್ಲಿ ಜಯಭೇರಿಯಾಗಬೇಕಾದರೆ ಎಲ್ಲ ಸಮುದಾಯದ ಬೆಂಬಲವು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಇಂದು ಅಲ್ಪಸಂಖ್ಯಾತ ಯುವಮೋರ್ಚಾ ಘಟಕವನ್ನು ಸ್ಥಾಪನೆ ಮಾಡಿದೆ ಎಂದು ಹೇಳಿದರು.
ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಸಾಕಷ್ಟು ಗೊಂದಲದಲ್ಲಿದೆ. ಚುನಾವಣೆ ನಡೆಯಲು ಕೇವಲ 20 ತಿಂಗಳು ಬಾಕಿ ಇದೆ. ಇಗಾಗಲೇ ರಾಜ್ಯದ ಜನತೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆರುತ್ತದೆ. ನಮ್ಮ ಸರಕಾರದಲ್ಲಿ ಮುಸಲ್ಮಾನರು ಸಚಿವರಾಗಬೇಕು ಅವಾಗಲೇ ಪರಿಪೂರ್ಣವಾಗುತ್ತದೆ ಎಂದು ಹೇಳುತ್ತಿದ್ದಾರೆ.
ಬಿಜಿಪಿ ಮುಸ್ಲಿಂ ಮಿರೋಧಿ ಎಂದು ಸಾರ್ವಜನಿಕರಲ್ಲಿ ಕಾಂಗ್ರೆಸ್ ವಿಷದ ಬೀಜ ಬಿತ್ತುತ್ತಿದೆ. ಕಾಂಗ್ರೆಸ್ ಪಕ್ಷ ವೋಟಿಗಾಗಿ ಮುಸಲ್ಮಾನರ ಭೇಟೆ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.