ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಸಂಘಟನೆಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಇಂತಹ ಢೋಂಗಿ ದೇಶಭಕ್ತರಿಂದ ಎಚ್ಚರಿಕೆ ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅವರ ಬಳಿ ಸಾಕ್ಷ್ಯಾಧಾರಗಳು ಇದ್ದರೆ ಸರಕಾರಕ್ಕೆ ನೀಡಲಿ ಎಂದರು.
ಪ್ರಕರಣ ಕುರಿತು ತನಿಖೆ ನಡೆಯುತ್ತಿದ್ದು, ಎಬಿವಿಪಿ ಹಾಗೂ ಬಿಜೆಪಿಯವರ ಬಳಿ ಸಾಕ್ಷ್ಯಾಧಾರಗಳು ಇದ್ದರೆ ಸರಕಾರಕ್ಕೆ ಹಾಜರು ಪಡಿಸಬಹುದಾಗಿದೆ. ಅದರ ಬದಲು ದೇಶಪ್ರೇಮದ ಹೆಸರಿನಲ್ಲಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ.
ಅಮ್ನೆಸ್ಟಿ ಇಂಡಿಯಾ ಸಂಸ್ಥೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ನಮಗೂ ರಾಷ್ಟ್ರೀಯತೆಯ ಮೇಲೆ ಗೌರವ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಯನ್ನು ತಿರುಚಲಾಗಿದೆ. ಭಾರತೀಯ ಜನತಾ ಪಾರ್ಟಿ ಫ್ಯಾಸಿಸ್ಟ್ ಸಂಸ್ಕೃತಿ ಅನುಸರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ