ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದೆ. ಹೀಗಾಗಿ ಸ್ಪೀಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮುಖಂಡ ಒತ್ತಾಯ ಮಾಡಿದ್ದಾರೆ.
									
										
								
																	ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿಯ ನಾಯಕ ರೇಣುಕಾಚಾರ್ಯ ಆಗ್ರಹ ಮಾಡಿದ್ದಾರೆ.
									
			
			 
 			
 
 			
			                     
							
							
			        							
								
																	ಮಾಧ್ಯಮದವರೊಂದಿಗೆ ಮಾತನಾಡಿರೋ ರೇಣುಕಾಚಾರ್ಯ, ವಿಧಾಸಭೆ ಕಲಾಪದಲ್ಲಿ ಮೈತ್ರಿ ಪಕ್ಷಗಳು ಬಹುಮತ ಸಾಬೀತುಪಡಿಸೋಕೆ ಸಾಧ್ಯವಾಗಿಲ್ಲ. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಸ್ಥಾನದಿಂದ ನಿರ್ಗಮಿಸಬೇಕೆಂದರು.
									
										
								
																	ರಾಜ್ಯದ ಅಭಿವೃದ್ಧಿಯನ್ನು ಬಿಜೆಪಿ ನೇತೃತ್ವದ ಸರಕಾರ ಮಾಡಲಿದೆ ಅಂತ ರೇಣುಕಾಚಾರ್ಯ ಹೇಳಿದ್ರು.