Select Your Language

Notifications

webdunia
webdunia
webdunia
webdunia

ಇನ್ನು ಮೂರು ತಿಂಗಳಲ್ಲಿ ರಾಜ್ಯಕ್ಕೆ ಹೊಸ ಸಿಎಂ!

ಇನ್ನು ಮೂರು ತಿಂಗಳಲ್ಲಿ ರಾಜ್ಯಕ್ಕೆ ಹೊಸ ಸಿಎಂ!
ಬೆಂಗಳೂರು , ಮಂಗಳವಾರ, 7 ಆಗಸ್ಟ್ 2018 (09:45 IST)
ಬೆಂಗಳೂರು: ಇನ್ನು ಮೂರೇ ತಿಂಗಳಲ್ಲಿ ಈ ಮೈತ್ರಿ ಸರ್ಕಾರ ಪತನಗೊಂಡು ಬಿಎಸ್ ಯಡಿಯೂರಪ್ಪ ಹೊಸ ಸಿಎಂ ಆಗಲಿದ್ದಾರಂತೆ! ಹಾಗಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ತಮ್ಮದೇ ಬೆಂಬಲದೊಂದಿಗೆ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರು ಸಿದ್ದರಾಮಯ್ಯಗೇ ಅವಮಾನ ಮಾಡುತ್ತಿದ್ದಾರೆ. ಇದನ್ನು ನೋಡಿ ಸ್ವತಃ ಸಿದ್ದರಾಮಯ್ಯ ಅವರೇ ಈ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ.

ಇದಾದ ಬಳಿಕ ಬಿಎಸ್ ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಜನ ನನಗೆ ಮತ ಹಾಕಿಲ್ಲ ಎಂದು ಸಿಎಂ ಕುಮಾರಸ್ವಾಮಿ ಈ ಭಾಗದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಯಾಕೆ ಮುಸ್ಲಿಂ ಟೋಪಿ ಧರಿಸಲ್ಲ?