Publish Date: Tue, 08 Jan 2019 (11:19 IST)
Updated Date: Tue, 08 Jan 2019 (11:22 IST)
ಚಿತ್ರದುರ್ಗ : ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ. ಚಂದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ಠಾಣೆಯ ಎದುರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ. ಚಂದ್ರಪ್ಪ, ಅಧಿಕಾರಿಗಳಿಗೆ ಸಿಕ್ಕ ಸಿಕ್ಕಲ್ಲಿ ಹೊಡೆಯುತ್ತೇವೆ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಶಾಸಕ ಚಂದ್ರಪ್ಪ ವಿರುದ್ಧ ಐಪಿಸಿ ಸೆಕ್ಷನ್ 189, 504, 506(2) ಪ್ರಕರಣದಡಿಯಲ್ಲಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.