Publish Date: Tue, 25 Dec 2018 (12:32 IST)
Updated Date: Tue, 25 Dec 2018 (12:36 IST)
ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿತ್ತು. ಪಕ್ಷಗಳಿಗಾಗಿ ದುಡಿದಿರುವವರನ್ನು ಕಡೆಗಣಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ರಾಮಲಿಂಗಾರೆಡ್ಡಿ ಅವರ ಮನೆಗೆ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ ಭೇಟಿ ನೀಡಿದ್ದಾರೆ. ಬಿಜೆಪಿಗೆ ಅವರನ್ನು ಸೆಳೆಯುವ ಪ್ರಯತ್ನ ನಡೆದಿದೆಯೇ ಎಂಬ ಅನುಮಾನ ಮೂಡುತ್ತಿದೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಿಜೆಪಿ ಶಾಸಕರಾದ ಸತೀಶ್ ಕೃಷ್ಣ, ಕೃಷ್ಣಪ್ಪ ರಾಮಲಿಂಗಾರೆಡ್ಡಿ ಅವರನ್ನು ರಹಸ್ಯ ಭೇಟಿಯಾದ ಬೆನ್ನಲ್ಲೇ ಎಸ್‌ಆರ್ ವಿಶ್ವನಾಥ್ ಅವರು ಭೇಟಿ ಮಾಡಿದ್ದಾರೆ.