ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು, ಸಂಸದರು ನಿಜವಾಗ್ಲೂ ಗಂಡಸ್ರಾ ಎಂದು ಜೆಡಿಎಸ್ ರೆಬೆಲ್ ಶಾಸಕ ಎಚ್.ಸಿ.ಬಾಲಕೃಷ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂದಿಸಿದಂತೆ ಬಿಜೆಪಿ ಸಂಸದರು ಹಾಗೂ ಮುಖಂಡರಿಗೆ ಯೋಗ್ಯತೆ ಇದ್ದರೆ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ್ಯಗೊಳಿಸಲಿ ಎಂದರು.
ಇನ್ನೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧ ಹರಿಹಾಯ್ದ ಅವರು, ಜಗದೀಶ್ ಶೆಟ್ಟರ್ ಅಂತೂ ಕಳೆದು ಹೋಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಜೆಡಿಎಸ್ ಪಕ್ಷದ ಕುರಿತು ಮಾತನಾಡಲು ನಿರಾಕರಿಸಿದ ಅವರು, ಕಾವೇರಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಹೋರಾಡಬೇಕು. ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸುತ್ತೇವೆ. ಸಿಎಂ ನೇತೃತ್ವದಲ್ಲಿ ಕಾವೇರಿ ಹೋರಾಟ ನಡೆಯಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ