Publish Date: Thu, 28 Jun 2018 (10:01 IST)
Updated Date: Thu, 28 Jun 2018 (10:02 IST)
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಬಳಗ ಜೆಡಿಎಸ್ ಜತೆ ಸಂಘರ್ಷಕ್ಕೆ ಇಳಿದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಿ ಶ್ರೀರಾಮುಲು ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಕಾದಿದೆ ಎಂದಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಆಂತರಿಕ ಕಲಹ ದೊಡ್ಡ ಮಟ್ಟದಲ್ಲಿದೆ. ಈ ಆಂತರಿಕ ಕಲಹದಿಂದಾಗಿ ಸದ್ಯದಲ್ಲೇ ಸರ್ಕಾರ ಪತನಾಗುವುದು ಖಚಿತ ಎಂದು ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.
ಈ ನಡುವೆ ತಮ್ಮ ಸಂಪರ್ಕದಲ್ಲಿ ಕೆಲವು ಶಾಸಕರು ಇದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುವುದಿಲ್ಲ ಎಂದರೆ, ಇತ್ತ ಶ್ರೀರಾಮುಲು ಹೇಳಿಕೆ ಕುತೂಹಲ ಮೂಡಿಸಿದೆ.
ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮಾತು ಉಳಿಸಿಕೊಳ್ಳದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.