Daily Horoscope
✕

ಸಿಎಂ ಸಿದ್ದರಾಮಯ್ಯ ವಿರುದ್ಧ ಕಮಲ ಶಾಸಕ ಸುನಿಲ್ ಕುಮಾರ್ ಇದೆಂಥಾ ಆರೋಪ

Sampriya
ಶುಕ್ರವಾರ, 13 ಫೆಬ್ರವರಿ 2026 (15:53 IST)
‌
Photo Credit X
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಸಿವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೊಸ ಬಾಂಬ್‌ ಅನ್ನು ಸಿಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧದ ಬಗೆಗಿನ ಗಂಭೀರ ಆರೋಪದ ಬಗ್ಗೆ ಸುನಿಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಶೇರ್ ಮಾಡಿದ್ದಾರೆ.  

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಪ್ರಶ್ನೆ ಮಾಡಿರುವ ಸುನೀಲ್ ಕುಮಾರ್ ಅವರು, ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ ‘ಇಂದ್ರೀಯ’ ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ 6,000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ? ಅಥವಾ ನಿಮ್ಮಿಂದ ಮಾಡಿಸುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ವೈದ್ಯರು ಇಲ್ಲದೇ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತಹ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು? ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ ಎಂದು ವ್ಯಂಗ್ಯವಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments