Publish Date: Tue, 05 Dec 2017 (21:12 IST)
Updated Date: Tue, 05 Dec 2017 (21:13 IST)
ಬಿಜೆಪಿ ಶಾಸಕ ಸುರೇಶಕುಮಾರ್ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೆಲ ಕಾರ್ಯಕರ್ತರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸುರೇಶಕುಮಾರ ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಬೇಕು ಎಂದು ಇ-ಮೇಲ್ ಮೂಲಕ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ರಾಜಾಜಿನಗರ ಕ್ಷೇತ್ರದ ಶಾಸಕರಾಗಿರುವ ಸುರೇಶಕುಮಾರ್ ಅವರ ವಿರುದ್ಧ ಸ್ಥಳೀಯರು ತಿರುಗಿ ಬಿದ್ದಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಕ್ಷೇತ್ರದ ಮತದಾರರ ಹೆಸರಿನಲ್ಲಿ ಕಳುಹಿಸಿದ ಇಮೇಲ್ ಪತ್ರದಲ್ಲಿ ಸುರೇಶಕುಮಾರ್ ಅವರು ಕ್ಷೇತ್ರದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಜನರ ಕೈಗೂ ಸಿಗಲ್ಲ ಎಂಬ ಆಕ್ರೋಶ ವ್ಯಕ್ತಪಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.