Webdunia - Bharat's app for daily news and videos

Install App

ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ

Webdunia
ಸೋಮವಾರ, 7 ಜನವರಿ 2019 (11:42 IST)
ಚಿತ್ರದುರ್ಗ : ಮರಳು ದಂಧೆ ನೆಪದಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪೊಲೀಸ್ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಅಕ್ರಮವಾಗಿ ಮರಳು ದಂಧೆಯಲ್ಲಿ ತಮ್ಮ ಬೆಂಬಲಿಗರ ಮೇಲೆ ಪೋಲಿಸರು ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್  ಈ ಬಗ್ಗೆ ಮಾತನಾಡಲು ಪೊಲೀಸ್ ಠಾಣಿಗೆ ಬಂದಿದ್ದಾರೆ. ಅಲ್ಲಿ ಶಾಸಕರ ಮಾತಿಗೆ ಬೆಲೆ ಕೊಡದಿದ್ದಾಗ ಇದನ್ನು ನಾನು ಖಂಡಿಸುತ್ತೇನೆ ಎಂದು ಠಾಣೆಯ ಮುಂದೆಯೇ ಪೆಟ್ರೋಲ್ ಸುರಿದುಕೊಂಡು  ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದಾರೆ.


ಆ ವೇಳೆ ಬೆಂಬಲಿಗರು ಹಾಗೂ ಪೊಲೀಸರು ತಡೆದು ಹೊಸದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪೆಟ್ರೋಲ್ ಕಿವಿ, ಕಣ್ಣು ಮತ್ತು ಮೂಗಿನ ಒಳಗೆ ಹೋಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಕಣ್ಣಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಣ್ಣಿನಲ್ಲಿ ಪೆಟ್ರೋಲ್ ಹೋಗಿದ್ದರಿಂದ ಸಣ್ಣ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments