Publish Date: Fri, 21 Dec 2018 (12:18 IST)
Updated Date: Fri, 21 Dec 2018 (12:20 IST)
ದತ್ತ ಜಯಂತಿ ಅಂಗವಾಗಿ ಬಿಜೆಪಿ ಶಾಸಕರೊಬ್ಬರು ಭಿಕ್ಷಾಟನೆ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ನಾರಾಯಣಪುರದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ಮಾಡಿದ್ದಾರೆ. ದತ್ತಜಯಂತಿ ಅಂಗವಾಗಿ ಭಿಕ್ಷಾಟನೆ ಮಾಡಿದ ಶಾಸಕ ಸಿ.ಟಿ.ರವಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಹರಕೆ ಹೊತ್ತಿದ್ದೇನೆ ಎಂದ ಅವರು, ದೇಶಕ್ಕೆ ಸ್ವಾರ್ಥ ರಹಿತ ರಾಜಕಾರಣದ ಅವಶ್ಯವಿದೆ.
ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ. ದೇಶದ ಪ್ರಗತಿಗೆ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಹರಕೆ ಹೊತ್ತಿದ್ದೇವೆ ಎಂದರು.