Publish Date: Sun, 28 Jul 2019 (11:55 IST)
Updated Date: Sun, 28 Jul 2019 (11:59 IST)
ಮೈಸೂರು : ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಶ ಮತಯಾಚನೆ ಹಿನ್ನಲೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ.
ಸೋಮವಾರದ ಅಧಿವೇಶನದಲ್ಲಿ ಬಹುಮತ ಸಾಬೀತು ಪಡಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದು, ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೇವೆ ಎಂದು ಬಿಜೆಪಿ ಶಾಸಕರು ಕೂಡ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಆದರೆ ಈ ನಡುವೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ನಾಳೆ ಅಧಿವೇಶನದಲ್ಲಿ ಬಿಜೆಪಿ ಶಾಸಕರೇ ಯಡಿಯೂರಪ್ಪ ವಿರುದ್ಧ ಮತ ಹಾಕಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.