Publish Date: Tue, 07 May 2019 (19:08 IST)
Updated Date: Tue, 07 May 2019 (19:10 IST)
ಎಲ್ಲರೂ ಒಂದೇ ಮದುವೆ ಆಗಿ, ಎರಡೇ ಮಕ್ಕಳನ್ನು ಮಾಡಬೇಕು ಎಂದು ಮತ್ತೆ ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತಮ್ಮನಾಲಿಗೆಯನ್ನು ಹರಿಬಿಟ್ಟಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮನ್ ಸಿವಿಲ್ ಕೋಡ್ ಎಲ್ಲರಿಗೂ ಒಂದೇ ಆಗಬೇಕು. ಮೋದಿಮತ್ತೆ ಪ್ರಧಾನಿ ಆಗಲಿದ್ದು, ಎಲ್ಲರಿಗೂ ಕೋಡ್ ಅನ್ವಯವಾಗುವಂತೆ ಏಕರೂಪದ ಕಾನೂನು ಜಾರಿಗೆ ತರಲಾಗುವುದು ಎಂದರು.
ಎಲ್ಲರೂ ಒಂದೇ ಮದುವೆ ಆಗಿ, ಎರಡೇ ಮಕ್ಕಳನ್ನು ಮಾಡಬೇಕು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದಲ್ಲಿ
ಕಾಶ್ಮೀರ 370ನೇ ವಿಧಿ ತೆಗೆಯಲಾಗುವದು. ಸಮಾನ ನಾಗರಿಕ ಸಂಹಿತೆ ತರಲಾಗುವುದು. ಅಯೋಧ್ಯೆಯಲ್ಲಿ ರಾಮ ಮಂದಿರ, ಕಾಶಿ ವಿಶ್ವನಾಥ ಪುನಃ ನಿರ್ಮಾಣ ಮಾಡಲಾಗುವುದು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 300ಕ್ಕಿಂತ ಹೆಚ್ಚು ಸ್ಥಾನ ಬರಲಿದೆ ಎಂದರು. ಈ ಮೂಲಕ ಮತ್ತೆ ಮೋದಿ ಪ್ರಧಾನಿ ಆಗುತ್ತಾರೆಂದು ಯತ್ನಾಳ್ ಭವಿಷ್ಯ ನುಡಿದರು.