Webdunia - Bharat's app for daily news and videos

Install App

ಮೇಲ್ಮನೆ ಚುನಾವಣೆ ಬಿಜೆಪಿ ಲಿಸ್ಟ್ ರೆಡಿ..!!

Webdunia
ಮಂಗಳವಾರ, 16 ನವೆಂಬರ್ 2021 (15:18 IST)
ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಸ್ಥಳೀಯ ಸಂಸ್ಥೆಗಳ 25 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಒಂದೆರಡು ದಿನಗಳಲ್ಲಿ ಪ್ರಕಟವಾಗಲಿದೆ.ಬಿಜೆಪಿಯ ರಾಷ್ಟ್ರೀಯ ನಾಯಕರು ಬೇರೆ ಬೇರೆ ರಾಜ್ಯಗಳ ಪ್ರವಾಸದಲ್ಲಿರುವುದರಿಂದ, ರಾಜ್ಯ ನಾಯಕರು ಕಳುಹಿಸಿರುವ ಪಟ್ಟಿಯನ್ನು ಪರಿಚಯಿಸಲು ಸಮಯಾ ವಕಾಶ ಸಿಗದ ಕಾರಣ ವಿಳಂಬವಾಗಿದೆ ಎನ್ನಲಾಗುತ್ತಿದೆ.ಚಿಕ್ಕಮಗಳೂರಿನಿಂದ ಎಂ.ಕೆ.ಪ್ರಾಣೇಶ್ಗೆ ಟಿಕೆಟ್ ಬಹುತೇಕ ಖಾತರಿಯಾಗಿದೆ. ತುಮಕೂರಿನಿಂದ ಹುಲಿನಾಯ್ಕರ್ ಹೆಸರು ಕೇಳಿಬಂದಿದೆ.ಚಿತ್ರದುರ್ಗದಿಂದ ನವೀನ್, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಶ್ರೀನಿವಾಸ್, ಕೋಲಾರ, ಚಿಕ್ಕಬಳ್ಳಾಪುರದಿಂಚ ಚಿತ್ರ ನಿರ್ಮಾಪಕ ಸಿ.ಆರ್.ಮನೋಹರ್ ಹೆಸರುಗಳು ಚಾಲ್ತಿಯಲ್ಲಿವೆ.
 
ಸಂಘಟನೆ ಹಿನ್ನಡೆ ಇರುವ ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ ಕಡೆಗಳಲ್ಲಿ ಬಿಜೆಪಿ ಹೆಚ್ಚು ತಲೆಕೆಡಿಸಿಕೊಳ್ಳದೆ ಗೆಲ್ಲುವ ಕ್ಷೇತ್ರಗಳಿಗೆ ಹೆಚ್ಚಿನ ಗಮನಹರಿಸಲಿದೆ.
 
25 ಕ್ಷೇತ್ರಗಳಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಈ ಮೂಲಕ ವಿಧಾನಮಂಡಲದ ಉಭಯ ಸದನಗಳಲ್ಲೂ ಸ್ವಂತ ಬಲದ ಮೇಲೆ ಅಕಾರ ಹಿಡಿಯಬೇಕೆಂಬ ಬಿಜೆಪಿಯ ಬಹುದಿನಗಳ ಕನಸನ್ನು ನನಸು ಮಾಡಲು ಕಮಲಪಡೆ ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments