Publish Date: Tue, 23 May 2023 (21:00 IST)
Updated Date: Tue, 23 May 2023 (20:43 IST)
5 ವರ್ಷ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ.. ಡಿಕೆಶಿ ಸಿಎಂ ಆಗಲು ಸಿದ್ದರಾಮಯ್ಯ ಅವರು ಬಿಡಲ್ಲ ಎಂದು ಎಂ.ಬಿ.ಪಾಟೀಲ್ ಮೂಲಕ ಡಿಕೆಶಿಗೆ ಎಚ್ಚರಿಕೆ ನೀಡಿದ್ದಾರೆ.. ಈ ಮೂಲಕ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರೆ.. ಈ ಸರ್ಕಾರ ಸುಸ್ಥಿರವಾಗಿರಲಿದೆ ಎಂಬ ಲಕ್ಷಣ ಕಾಣುತ್ತಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ. ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ ATM ಸರ್ಕಾರ ರಚನೆಯಾಗಿರುವುದು.. ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ಟ್ವೀಟ್ನಲ್ಲಿ ಬಿಜೆಪಿ ಟೀಕಿಸಿದೆ.