Publish Date: Tue, 05 Dec 2017 (09:11 IST)
Updated Date: Tue, 05 Dec 2017 (09:14 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಬಿಜೆಪಿಯವರ ಬಾಯಿ ಹೊಸಲಾಗಿದ್ದು, ಗಲಭೆ ಸೃಷ್ಠಿಸುವದನ್ನೇ ಕೆಲಸ ಮಾಡಿಕೊಂಡಿದ್ದಾರೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪಸಿಂಹ ಬಾಯಿ ಹೊಸಲಾಗಿದೆ. ಜನಪ್ರತಿನಿಧಿಯಾಗಿ ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಮತ್ತು ಜನರ ಭಾವನೆಗಳಿಗೆ ಗೌರವ ಕೊಡುವುದನ್ನು ಮರೆತಿದ್ದಾರೆ ಎಂದಿದ್ದಾರೆ.
ಅಮಿತ್ ಶಾ ಬಿಸಿ ಮುಟ್ಟಿಸಿದ ನಂತರ ಹತಾಶೆ ಭಾವನೆಯಿಂದ ರಾಜ್ಯದಲ್ಲಿ ಅಶಾಂತಿ ವಾತಾವರಣ ಮಾಡಲು ಬಿಜೆಪಿಯವರು ಮುಂದಾಗಿದ್ದಾರೆ ಎಂದು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.