Publish Date: Tue, 18 Feb 2020 (10:47 IST)
Updated Date: Tue, 18 Feb 2020 (10:49 IST)
ಮೈಸೂರು : ಜಯದೇವ್ ಆಸ್ಪತ್ರೆ ನಿರ್ಮಾಣ ಮಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡರುವ ಸಂಸದ ಪ್ರತಾಪ್ ಸಿಂಹ, ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಸೇರಿದ್ದು, ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ.
ಅಲ್ಲದೇ 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಸಿಎಂ ಸಿದ್ದರಾಮಯ್ಯ ಸಾಹೇಬ್ರಿಗೆ , ಉತ್ತಮ ಸೇವೆ ನೀಡುತ್ತಿರುವ ಡಾ.ಮಂಜುನಾಥ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.