ಬಿಜೆಪಿಯಲ್ಲಿ ಗುಣಾತ್ಮಕ ಬದಲಾವಣೆಗಳಾಗಬೇಕು. ನಾವು ಇತರರಿಗಿಂತ ಭಿನ್ನ ಎನ್ನುವುದನ್ನು ತೋರಿಸುವುದು ಅಗತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಪ್ರಶಿಕ್ಷಣಇ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಪೋರೇಟರ್‌ಗಳು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಹೈಕೋರ್ಟ್ ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಠಮಾರಿ ಧೋರಣೆ ತಳೆದು ಟಿಪ್ಪು ಜಯಂತಿ ಆಚರಿಸಿಯೇ ತೀರುತ್ತೇವೆ ಎನ್ನುವ ಅಹಂಕಾರ ಪ್ರದರ್ಶಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಬಿಸಿ ಸಮಾವೇಶಕ್ಕೆ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸುಮಾರು ಮೂರು ಲಕ್ಷ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ