Select Your Language

Notifications

webdunia
webdunia
webdunia
webdunia

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Nitin Nabin
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಜೀ ಅವರು, ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. 
 
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು.
 
ನಾಳೆ (ಮೇ 24) ಮುಂಜಾನೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಲಿದ್ದಾರೆ ಎಂದು ವಿವರಿಸಿದರು. ನಂತರ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವ ಅವರು, ಹತ್ತು ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಲಿದ್ದಾರೆ. ಎರಡು ಗಂಟೆಗಳ ಕಾಲ ರಾಜ್ಯದ ಬಿಜೆಪಿ ಸಂಸದರು, ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದ ರಾಜಕೀಯ ಸ್ಥಿತಿಗತಿಯ ಅವಲೋಕನ ಮಾಡಲಿದ್ದಾರೆ ಎಂದು ಹೇಳಿದರು. 
 
ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ನಂತರ ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಿಕ್ಷಣ ವರ್ಗದಲ್ಲಿ  ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಪ್ರಶಿಕ್ಷಣದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಷಯ. ನಮ್ಮ ಕಾರ್ಯಕರ್ತರಿಗೆ ರಾಷ್ಟ್ರೀಯ ಅಧ್ಯಕ್ಷರು ಸ್ಫೂರ್ತಿ ತುಂಬಲಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ