ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ರಾಜಕೀಯ ಗುದ್ದಾಟದಲ್ಲಿ ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಬಲಿಯಾಗಿದ್ದಾನೆ. ಅತೃಪ್ತರ ಸಭೆಗೆ ಕರಪತ್ರ ರೆಡಿ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್ ಅವರನ್ನ ಕೆಲಸದಿಂದ ವಜಾ ಮಾಡಲಾಗಿದೆ.
ನಿನ್ನೆ ಅತೃಪ್ತರ ಸಭೆ ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, ಸಂತೋಷ್ ಜಿ ಶಿಷ್ಯರೇ ಸಭೆಯಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲೇ ಡ್ರಾಫ್ಟ್ ಸಿದ್ಧವಾಗಿದೆ ಎಂಬ ಆರೋಪ ಮಾಡಿದ್ದರು.
ಇಂದು ಸಂಜೆ ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಯಡಿಯೂರಪ್ಪ ಪಕ್ಷದ ಬಿಕ್ಕಟ್ಟಿನ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ರಾಜ್ಯದಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ರಾಷ್ಟ್ರಾಧ್ಯಕ್ಷ ಮೌನವಹಿಸಿರುವುದು ಕುತುಹಲಕ್ಕೆ ಎಡೆಮಾಡಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವಾಗ ಅಮಿತ್ ಶಾ ಗೇಮ್ ಪ್ಲಾನ್ ಏನು ಎಂಬುದೇ ಈಗ ಯಕ್ಷ ಪ್ರಶ್ನೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
. .