Select Your Language

Notifications

webdunia
webdunia
webdunia
webdunia

ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬಿಸಿಲೂರಿನಲ್ಲಿ ಬೀದಿಗಿಳಿದ ಬಿಜೆಪಿ

ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬಿಸಿಲೂರಿನಲ್ಲಿ ಬೀದಿಗಿಳಿದ ಬಿಜೆಪಿ
ಕಲಬುರಗಿ , ಗುರುವಾರ, 14 ಫೆಬ್ರವರಿ 2019 (15:00 IST)
ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಬಿಸಿಲೂರಿನಲ್ಲಿ ಬಿಜೆಪಿ ಪ್ರತಿಭಟನೆ
ನಡೆಸಿದೆ.

ಬಿಜೆಪಿ ಶಾಸಕರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದೆ.

ಕಲಬುರಗಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೂಂಡಾ ರಾಜಕೀಯ ಮಾಡ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ‌ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆ ಬಳಿಕ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೈತ್ರಿ ಸರಕಾರದ ವಿರುದ್ಧ ಘೋಷಣೆ ಕೂಗಲಾಯಿತು.




Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಿಂಧನೂರಿಗೆ ಅಮಿತ್ ಶಾ ಆಗಮನ